ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ಚಂದನವನದ ಕ್ಯೂಟ್ ಬೆಡಗಿ ಅಮೂಲ್ಯ ಅವರ ಜೊತೆಗಿನ ಸುಂದರ ಫೋಟೋಗಳು

Darshan wife Vijaya lakshmi With Amulya: ಸ್ನೇಹಿತರೆ, ದರ್ಶನ್ ಅವರ ಪತ್ನಿ ವಿಜಯ್ ಲಕ್ಷ್ಮಿ ಅವರು ಕಳೆದ ಕೆಲವು ದಿನಗಳ ಹಿಂದಷ್ಟೇ ತಮ್ಮ ಪತಿ ಹಾಗೂ ಸ್ನೇಹಿತರೊಟ್ಟಿಗೆ ಬಹಳ ಅದ್ದೂರಿಯಾಗಿ ರೆಸಾರ್ಟ್ ಒಂದರಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ವಿಜಯಲಕ್ಷ್ಮಿ ಅವರ ಬರ್ತಡೆ ಸಂಭ್ರಮಕ್ಕೆ ಸ್ಯಾಂಡಲ್ವುಡ್ನ ಸಿನಿ ತಾರೆಯರು ಹಾಗೂ ಅಭಿಮಾನಿಗಳು ಶುಭಾಶಯಗಳು ಮಹಾಪೂರವನ್ನೇ ಹರಿಸಿದರು.

ಅದರಂತೆ ದರ್ಶನ್ ಅವರ ಕುಟುಂಬದೊಂದಿಗೆ ವಿಶೇಷ ಭಾಂದವ್ಯವನ್ನು ಬೆಳೆಸಿಕೊಂಡಿರುವಂತಹ ಚೆಲುವಿನ ಚಿತ್ತಾರ ಖ್ಯಾತಿಯ ಕ್ಯೂಟ್ ನಟಿ ಅಮೂಲ್ಯ(Amulya) ಅವರು ವಿಜಯಲಕ್ಷ್ಮಿ ಅವರ ಜೊತೆಗಿರುವಂತಹ ಕೆಲ ಸುಂದರ ಫೋಟೋಗಳನ್ನು ಶೇರ್ ಮಾಡಿಕೊಂಡು ನಾನು ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಅಕ್ಕ. ನೀವು ಯಾವಾಗಲೂ ಸಂತೋಷದಿಂದ ಇರಬೇಕು ಎಂಬ ವಿಶೇಷ ಕ್ಯಾಪ್ಶನ್ ಬರೆದು ಪೋಸ್ಟ್ ಹಂಚಿಕೊಂಡಿದ್ದಾರೆ.

ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಾ, ಅಭಿಮಾನಿಗಳ ಮನಸ್ಸನ್ನು ಗೆದ್ದಿದೆ. ಹೌದು ಗೆಳೆಯರೇ ದರ್ಶನ್(Darshan) ಅವರೊಂದಿಗೆ ಲಾಲಿ ಹಾಡು (Laali Haadu) ಚಿತ್ರದಲ್ಲಿ ಬಾಲ ನಟಿಯಾಗಿ ಕಾಣಿಸಿಕೊಂಡಿದಂತಹ ಅಮೂಲ್ಯ(Amulya) ಅವರು ಆ ಸಮಯ‌ ದಿಂದಲೂ ದರ್ಶನ್ ಮತ್ತು ಅವರ ಕುಟುಂಬದೊಂದಿಗೆ ವಿಶೇಷವಾದ ಭಾಂದವ್ಯವನ್ನು ಬೆಳಸಿಕೊಂಡಿದ್ದಾರೆ.

ಮನೆಯಲ್ಲಿ ನಡೆಯುವಂತಹ ಕಾರ್ಯಕ್ರಮಗಳು ಹಾಗೂ ಪಾರ್ಟಿಗಳಲ್ಲಿ ಜೊತೆಯಾಗುವಂತಹ ಅಮೂಲ್ಯ ಅವರಿಗೆ ದರ್ಶನ್ ಮತ್ತು ಅವರ ಕುಟುಂಬವೆಂದರೆ ಎಲ್ಲಿಲ್ಲದ ಪ್ರೀತಿ, ಅಭಿಮಾನ ಹಾಗೂ ಗೌರವ ಅದರಲ್ಲೂ ವಿಜಯಲಕ್ಷ್ಮಿ ಅವರೊಂದಿಗೆ ಹೆಚ್ಚು ಆತ್ಮೀಯರಾಗಿರುವ ಅಮೂಲ್ಯ ಯಾವಾಗಲೂ ಅವರನ್ನು ಅಕ್ಕ ಎಂದು ಕರೆಯುತ್ತಿರುತ್ತಾರೆ. ಬಿಡುವು ಸಿಕ್ಕಾಗಲೆಲ್ಲ ಭೇಟಿ ಮಾಡಿ ಒಟ್ಟಿಗೆ ಸಮಯ ಕಳೆಯುವಂತಹ ಅಮೂಲ್ಯ ಮತ್ತು ವಿಜಯಲಕ್ಷ್ಮಿ(Amulya & Vijaylakshmi) ಯವರು ತಮ್ಮ ಸುಂದರ ಫೋಟೋಗಳನ್ನು ಇನ್ಸ್ಟಾಗ್ರಾಮ್ ಹಾಗೂ ಫೇಸ್ಬುಕ್ ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಸಂಭ್ರಮ ಪಡುತ್ತಿರುತ್ತಾರೆ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ

Leave A Reply

Your email address will not be published.

error: Content is protected !!