Anushka Shetty: ಮದುವೆ ಸುದ್ದಿ ಸದ್ದಾಗ್ತಿರೋ ಸಮಯದಲ್ಲೇ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಅನುಷ್ಕಾ ಶೆಟ್ಟಿ!

Anushka Shetty ಪುತ್ತೂರು ಮೂಲದವರಾಗಿದ್ದರು ಕೂಡ ಇದುವರೆಗೂ ಯಾವುದೇ ಕನ್ನಡ ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿಲ್ಲ ಎನ್ನುವ ಬಗ್ಗೆ ಅನುಷ್ಕಾ ಶೆಟ್ಟಿ ಅವರ ಬಗ್ಗೆ ಕನ್ನಡದ ಅಭಿಮಾನಿಗಳಲ್ಲಿ ಸಾಕಷ್ಟು ಬೇಸರವಿದೆ ನಿಜ ಆದರೆ ಇಂದಿಗೂ ಕೂಡ ಕನ್ನಡ ಅಭಿಮಾನಿಗಳು ಅನುಷ್ಕಾ ಶೆಟ್ಟಿ(Anushka Shetty) ಅವರನ್ನು ಲೇಡಿ ಸೂಪರ್ಸ್ಟಾರ್ ರೀತಿಯಲ್ಲಿ ಆಚರಿಸುತ್ತಾರೆ.

ಅನುಷ್ಕಾ ಶೆಟ್ಟಿ(Anushka Shetty) ಅವರ ಕುರಿತಂತೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ದೊಡ್ಡ ಮಟ್ಟದ ಗಾಳಿ ಸುದ್ದಿಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಓಡಾಡಲು ಪ್ರಾರಂಭವಾಗಿದ್ದವು. ಅದರಲ್ಲೂ ಪ್ರಮುಖವಾಗಿ ಈಗಾಗಲೇ ಯಾರಿಗೂ ತಿಳಿಯದಂತೆ ಅನುಷ್ಕಾ ಶೆಟ್ಟಿ ಅವರು ಮದುವೆಯಾಗಿದ್ದಾರೆ ಎನ್ನುವ ಸುದ್ದಿಗಳು ಕೂಡ ಓಡಾಡುತ್ತಿದ್ದವು.

ಇದಕ್ಕೆ ಅನುಷ್ಕಾ ಶೆಟ್ಟಿ ಅವರೇ ಮಾಧ್ಯಮಗಳ ಮುಂದೆ ಬಂದು ಇಂತಹ ಸುಳ್ಳು ಸುದ್ದಿಗಳನ್ನು ನಂಬಲು ಹೋಗಬೇಡಿ ಎಂಬುದಾಗಿ ಅಧಿಕೃತವಾಗಿಯೇ ಈ ವಿಚಾರ ಬೇರೆ ಸುದ್ದಿಗಳಂತೆ ಗಾಳಿ ಸುದ್ದಿ ಎಂಬುದನ್ನು ಅಧಿಕೃತವಾಗಿ ಸ್ಪಷ್ಟಪಡಿಸಿದ್ದರು. ನಡುವಲ್ಲಿ ಈಗ ಮತ್ತೊಂದು ಶುಭ ಸುದ್ದಿಯನ್ನು ಅನುಷ್ಕಾ ಶೆಟ್ಟಿ ಹಂಚಿಕೊಂಡಿದ್ದಾರೆ.

ಅದೇನೆಂದರೆ ಟ್ವಿಟರ್ ನಲ್ಲಿ ಅನುಷ್ಕಾ ಶೆಟ್ಟಿ(Anushka Shetty) ಅವರು ಭರ್ಜರಿ ಒಂದು ಮಿಲಿಯನ್ ಫಾಲೋವರ್ಸ್ ಅನ್ನು ಕಂಪ್ಲೀಟ್ ಮಾಡುವ ಮೂಲಕ ಮತ್ತೊಂದು ಸಾಧನೆಯನ್ನು ಮಾಡಿದ್ದಾರೆ ಈ ಸಂತೋಷದ ಸುದ್ದಿಯನ್ನು ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದಾರೆ. ನೀವು ಕೂಡ ಕಾಮೆಂಟ್ ನಲ್ಲಿ ಅನುಷ್ಕಾ ಶೆಟ್ಟಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಬಹುದಾಗಿದೆ.

Leave a Comment

error: Content is protected !!