ಅಶ್ವಿನಿ ಪುನೀತ್ ರಾಜಕುಮಾರ್ ಅವರ ಬೆನ್ನ ಹಿಂದೆ ಯಾವುದೇ ಸದ್ದಿಲ್ಲದೆ ಕುಳಿತುಕೊಂಡಿದ್ದ ಖ್ಯಾತ ನಟಿ ಯಾರು ಗೊತ್ತಾ? ವಿಡಿಯೋ ಫುಲ್ ವೈರಲ್.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ಇತ್ತೀಚಿಗಷ್ಟೇ ಒಂದು ಹೆಲ್ತ್ ಕಾರ್ಡ್ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿತ್ತು ಇದಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಕೂಡ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಕಾರ್ಡ್ ಅನ್ನು ಸಿನಿಮಾ ಹಾಗೂ ಕಿರುತೆರೆಯ ಕಲಾವಿದರಿಗೆ ನೀಡುವಂತಹ ಕಾರ್ಯವನ್ನು ಅಲ್ಲಿ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಹಲವಾರು ಸೆಲೆಬ್ರಿಟಿಗಳನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರು ಭೇಟಿ ಮಾಡಿದ್ದಾರೆ.

ಇನ್ನು ಇದೇ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ವೇದಿಕೆಯ ಮುಂಬಾಗದಲ್ಲಿ ಮೊದಲಿಗೆ ಆಸೀನರಾಗಿದ್ದ ಸಂದರ್ಭದಲ್ಲಿ ಅವರ ಹಿಂದೇನೆ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಹಾಸ್ಯ ಕಲಾವಿದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾಕೆ ಯಾವುದೇ ಸದ್ದಿಲ್ಲದೆ ಕುಳಿತುಕೊಂಡಿದ್ದು ಕಂಡು ಬಂದಿತು. ಹೌದು ನಾವ್ ಮಾತನಾಡುತ್ತಿರುವುದು ನೂರಾರು ಕನ್ನಡ ಸಿನಿಮಾಗಳಲ್ಲಿ ಹಾಗೂ ಧಾರವಾಹಿಗಳಲ್ಲಿ ಕೂಡ ಕಾಣಿಸಿಕೊಂಡಿರುವ ನಟಿ ರೇಖಾದಾಸ್ ಅವರ ಕುರಿತಂತೆ.

ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಬಹು ಬೇಡಿಕೆಯ ಕಲಾವಿದ ಆಗಿ ಕಾಣಿಸಿಕೊಂಡಿದ್ದ ರೇಖಾದಾಸ್ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಸಿನಿಮಾಗಳಲ್ಲಿ ಹಾಗೂ ಧಾರವಾಹಿಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಅವರು ಕೂಡ ಈ ಹೆಲ್ತ್ ಕಾರ್ಡ್ ಕಾರ್ಯಕ್ರಮಕ್ಕೆ ಬಂದಿದ್ದು ಮದುಮಗಲಿಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಹಿಂದೇನೆ ಕುಳಿತುಕೊಂಡಿದ್ದರು ಕೂಡ ಯಾವುದೇ ಸದ್ದಿಲ್ಲದೆ ಕುಳಿತುಕೊಂಡಿದ್ದರು.

ನಂತರ ಕಾರ್ಯಕ್ರಮ ಮುಗಿದ ಮೇಲೆ ವೇದಿಕೆಯಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ಮಾತನಾಡಿಸಿ ನಮಸ್ಕರಿಸಿ ರೇಖಾದಾಸ್ ರವರು ಹೋಗುತ್ತಾರೆ. ಇತ್ತೀಚಿನ ದಿನಗಳಲ್ಲಿ ನಮ್ಮ ಕನ್ನಡ ಚಿತ್ರರಂಗದಲ್ಲಿ ಹಿರಿಯ ಕಲಾವಿದರಿಗೆ ಹೊಸ ಕಲಾವಿದರ ಆಗಮನದಿಂದಾಗಿ ಅವಕಾಶಗಳು ಕಡಿಮೆ ಆಗುತ್ತಿದೆ ಎಂಬುದು ದಟ್ಟವಾಗಿ ಕಾಣುತ್ತಿದೆ ಎಂದು ಹೇಳಬಹುದಾಗಿದೆ.

Leave a Comment

error: Content is protected !!