Latest CM Of Karnataka: ಯಾರಾಗಲಿದ್ದಾರೆ? ಕರ್ನಾಟಕದ ಹೊಸ ಮುಖ್ಯಮಂತ್ರಿ. ಇಲ್ಲಿದೆ ನೋಡಿ ಸಾಧ್ಯತೆಗಳು.

Latest CM Of Karnataka ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಮುಗಿದಿದ್ದು ಕಾಂಗ್ರೆಸ್(Congress) ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ. ಚುನಾವಣೆಗೂ ಮುನ್ನ ಸಾಕಷ್ಟು ಊಹಾಪೋಹಗಳು ಕೂಡ ನಡೆಯುತ್ತಿದ್ದವು. ಆದರೆ ಕೊನೆಗೂ ಈಗ ಯಾರ ಸಹಾಯವೂ ಇಲ್ಲದೆ ಕರ್ನಾಟಕ ರಾಜ್ಯದಲ್ಲಿ ಈ ಬಾರಿಯ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಮುಖ ನಾಯಕರು ಆಗಿರುವ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ್ ಅವರ ಸಾರಥ್ಯದಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ದೊಡ್ಡ ಮಟ್ಟದ ಗೆಲುವನ್ನು ದಾಖಲಿಸಲು ಸಾಧ್ಯವಾಯಿತು ಎಂದರೆ ತಪ್ಪಾಗಲಾರದು. ಆದರೆ ಈ ಬಾರಿ ಮುಖ್ಯಮಂತ್ರಿಯನ್ನಾಗಿ ಇವರಿಬ್ಬರಲ್ಲಿ ಅಥವಾ ಬೇರೆ ಯಾರನ್ನಾದರೂ ಆಯ್ಕೆ ಮಾಡುವುದಿದ್ದರೆ ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದು ಎಲ್ಲರಿಗೂ ಕೂಡ ದೊಡ್ಡ ಯಕ್ಷಪ್ರಶ್ನೆಯಾಗಿದೆ.

ಸದ್ಯಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಇವರಿಬ್ಬರನೇ ದೊಡ್ಡ ಮಟ್ಟದ ನಾಯಕರು ಎಂಬುದಾಗಿ ಪರಿಗಣಿಸಲಾಗುತ್ತಿದ್ದು ಸಿದ್ದರಾಮಯ್ಯ ಅವರು ನಿಮಗೆಲ್ಲರಿಗೂ ತಿಳಿದಿರುವಂತೆ ಸರಿಸುಮಾರು ಎರಡು ಬಾರಿ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷದಿಂದ ಕಾಣಿಸಿಕೊಂಡಿದ್ದು ಹೀಗಾಗಿ ಈ ಬಾರಿ ಕೊನೆಯ ಬಾರಿ ಮುಖ್ಯಮಂತ್ರಿ ಸ್ಥಾನವನ್ನು ಕೂಡ ಅವರಿಗೆ ನೀಡಬಹುದು ಎಂಬುದಾಗಿ ಚರ್ಚೆ ನಡೆಯುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಅದೇ ವಿಚಾರ ಹರಿದಾಡುತ್ತಿದೆ. ಆದರೆ ಇನ್ನೊಂದು ಕಡೆ ಮತ್ತೊಂದು ವಿಚಾರ ಕೂಡ ಹರಿದಾಡುತ್ತಿದೆ.

ಅದೇನೆಂದರೆ ಮತ್ತೊಬ್ಬ ಪ್ರಬಲ ಕಾಂಗ್ರೆಸ್ ನಾಯಕ ಆಗಿರುವ ಡಿಕೆ ಶಿವಕುಮಾರ್ ಅವರು ಈಗಾಗಲೇ ಸಾಕಷ್ಟು ಬಾರಿ ಕಾಂಗ್ರೆಸ್ ಪಕ್ಷದ ಹಲವಾರು ಸಮಸ್ಯೆಗಳನ್ನು ನಿವಾರಿ ಸಿ ಸ್ಪಷ್ಟ ಬಹುಮತ ಪಡೆದುಕೊಳ್ಳುವಲ್ಲಿ ಅವರು ಕೂಡ ಕಾರಣರಾಗಿದ್ದು ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಲು ಸಾಧ್ಯತೆಗಳು ಹೆಚ್ಚಿವೆ ಎಂಬುದಾಗಿ ತಿಳಿದು ಬಂದಿದೆ. ಕೆಲವೊಂದು ಮೂಲಗಳ ಪ್ರಕಾರ ಡಿಕೆ ಶಿವಕುಮಾರ್(DK Shivakumar) ಅವರು ಮುಖ್ಯಮಂತ್ರಿ ಸ್ಥಾನವನ್ನು ನೀಡದಿದ್ದರೆ ಯಾವುದೇ ಮಂತ್ರಿ ಸ್ಥಾನವನ್ನು ನನಗೆ ನೀಡಬೇಡಿ ಎಂಬುದಾಗಿ ಹೈಕಮಾಂಡ್ ಬಳಿ ಪಟ್ಟು ಹಿಡಿದು ಕುಳಿತಿದ್ದಾರೆ ಎಂಬ ಸುದ್ದಿಗಳು ಕೂಡ ಕೇಳಿ ಬರುತ್ತಿದೆ.

Leave a Comment

error: Content is protected !!