ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆದಿರುವ ನಯನತಾರ ದಂಪತಿಗಳಿಗೆ ಬಿಗ್ ಶಾಕ್. ಅಪರಾಧಿ ಸ್ಥಾನದಲ್ಲಿರುವ ನಯನತಾರಾ

ದಕ್ಷಿಣ ಭಾರತ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿರುವ ನಯನತಾರಾ ಅವರು ನಾಲ್ಕು ತಿಂಗಳ ಹಿಂದಷ್ಟೇ ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ಮದುವೆಯಾಗಿದ್ದರು. ಇವರು ಹಲವಾರು ವರ್ಷಗಳ ಕಾಲ ಒಟ್ಟಿಗೆ ಲಿವಿಂಗ್ ಟುಗೆದರ್ ರಿಲೇಶನ್ ಶಿಪ್ ನಲ್ಲಿ ಇದ್ದರು. ಪರಸ್ಪರ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡ ನಂತರವೇ ಇಬ್ಬರೂ ಕೂಡ ಶಾಸ್ತ್ರೋಕ್ತವಾಗಿ ಮದುವೆಯಾಗುವ ಮೂಲಕ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ನಟಿ ನಯನತಾರಾ ರವರು ಬಾಲಿವುಡ್ ಚಿತ್ರರಂಗದ ಕಿಂಗ್ ಖಾನ್ ಶಾರುಖ್ ಖಾನ್ ನಟನೆಯ ಬಹು ನಿರೀಕ್ಷಿತ ಚಿತ್ರ ಜವಾನ್ ಸಿನಿಮಾದಲ್ಲಿ ನಟಿಸುವ ಮೂಲಕ ಬಾಲಿವುಡ್ ಚಿತ್ರರಂಗಕ್ಕೆ ಕೂಡ ಪಾದರ್ಪಣೆ ಮಾಡುತ್ತಿದ್ದಾರೆ.

ಇನ್ನು ಮದುವೆಯಾದ ನಾಲ್ಕೇ ತಿಂಗಳಿಗೆ ನಯನತಾರ ಹಾಗೂ ವಿಘ್ನೇಶ್ ಶಿವನ್ ದಂಪತಿಗಳು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು ಎಂಬುದಾಗಿ ಹೇಳಿದ ಅಭಿಮಾನಿಗಳು ಮೊದಮೊದಲಿಗೆ ಆಶ್ಚರ್ಯಪಟ್ಟಿದ್ದರು. ಆದರೆ ನಂತರ ಎಲ್ಲರಿಗೂ ಇದು ಬಾಡಿಗೆ ತಾಯ್ತನದ ಮೂಲಕ ಪಡೆದಿರುವ ಮಕ್ಕಳು ಎಂಬುದಾಗಿ ತಿಳಿದು ಬಂದಿದೆ. ಆದರೆ ಇದರ ಬೆನ್ನಲ್ಲೇ ಈಗ ಇಬ್ಬರೂ ದಂಪತಿಗಳು ಕಾನೂನಾತ್ಮಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಕಾನೂನಿನ ಪ್ರಕಾರ ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ನೀಡುವ ಯುವತಿ ಅಥವಾ ಮಹಿಳೆ 21 ರಿಂದ 35 ವರ್ಷದವರಾಗಿರಬೇಕು. ಇನ್ನು ಯಾವುದೇ ಕಾರಣಕ್ಕೂ ಕೂಡ ಹಣಕ್ಕಾಗಿ ಅಂದರೆ ಕಮರ್ಷಿಯಲ್ ದೃಷ್ಟಿಯಲ್ಲಿ ಬಾಡಿಗೆ ತಾಯಿಯಾಗುವುದಕ್ಕೆ ಒಪ್ಪಿಕೊಳ್ಳಬಾರದೆಂಬ ಕಾನೂನು ಕೂಡ ಇದೆ. ಈ ಎಲ್ಲಾ ಆಯಾಮಗಳಲ್ಲಿ ಈಗ ತನಿಖೆ ನಡೆಸುವುದಕ್ಕಾಗಿ ಸರ್ಕಾರ ವೈದ್ಯಕೀಯ ಇಲಾಖೆಗೆ ಆದೇಶವನ್ನು ನೀಡಿದೆ ಎಂಬುದಾಗಿ ತಿಳಿದು ಬಂದಿದ್ದು ಮುಂದಿನ ದಿನಗಳಲ್ಲಿ ಈ ಪ್ರಕರಣದಲ್ಲಿ ಯಾವ ತಿರುವು ಕಂಡುಬರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

Leave a Comment

error: Content is protected !!